ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ತಾಪಮಾನ ಏರಿಕೆ

Published 17 ಆಗಸ್ಟ್ 2023, 23:30 IST
Last Updated 17 ಆಗಸ್ಟ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಾತಾವರಣದಲ್ಲಿ ಈ ತಿಂಗಳು ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಗರಿಷ್ಠ ತಾಪಮಾನ ಬಹುತೇಕ ದಿನ 30 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. 

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಗುರುವಾರ ಮಧ್ಯಾಹ್ನ 1 ಗಂಟೆಗೆ ಅನ್ವಯಿಸಿದಂತೆ ಕಳೆದ 24 ಗಂಟೆ ಅವಧಿಯಲ್ಲಿ ಗರಿಷ್ಠ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಈವರೆಗೆ ಆಗಸ್ಟ್ ತಿಂಗಳಲ್ಲಿ ವರದಿಯಾದ ಐದನೇ ಗರಿಷ್ಠ ತಾಪಮಾನ ಇದಾಗಿದೆ. ಮಳೆ ಕೊರತೆಯಿಂದಾಗಿ ತಾಪಮಾನ ಏರಿಕೆ ಕಾಣುತ್ತಿದೆ ಎಂದು ಇಲಾಖೆ ವಿಶ್ಲೇಷಿಸಿದೆ. 

ನಗರದಲ್ಲಿ 1899ರ ಆಗಸ್ಟ್ ತಿಂಗಳಲ್ಲಿ ಗರಿಷ್ಠ ತಾಪಮಾನ 33.3 ಡಿಗ್ರಿ ಸೆಲ್ಸಿಯಸ್ ವರದಿಯಾಗಿತ್ತು. ಇದು ಆಗಸ್ಟ್ ತಿಂಗಳಲ್ಲಿ ಈವರೆಗೆ ವರದಿಯಾದ ಗರಿಷ್ಠ ತಾಪಮಾನ. ಬೆಂಗಳೂರು ಜತೆಗೆ ಇಡೀ ರಾಜ್ಯದ ತಾಪಮಾನ ಏರುಗತಿ ಪಡೆದಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ನಗರದಲ್ಲಿ ಆಗಸ್ಟ್ ಮೊದಲ ವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು. ಆ.10ರ ಬಳಿಕ 31ರ ಗಡಿ ದಾಟಿದೆ. ಮುಂದಿನ ಐದು ದಿನಗಳು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT