ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

Published 16 ಸೆಪ್ಟೆಂಬರ್ 2023, 16:05 IST
Last Updated 16 ಸೆಪ್ಟೆಂಬರ್ 2023, 16:05 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೆಲವೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT