ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

Published 5 ಜೂನ್ 2024, 16:24 IST
Last Updated 5 ಜೂನ್ 2024, 16:24 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕಲಬುರಗಿ, ಯಾದಗಿರಿ, ಬಿಜಾಪುರ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗೆ ಗುರುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವೂ ಇದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಇದೇ 11ರವರೆಗೂ ಕರಾವಳಿಯ ಎಲ್ಲ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಕಲಬುರಗಿ ಸೇರಿ ಐದು ಜಿಲ್ಲೆಗಳಿಗೆ ಶುಕ್ರವಾರವೂ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. 

ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT