ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಆರು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಮುಂದುವರಿಕೆ

Published 13 ಜುಲೈ 2023, 14:48 IST
Last Updated 13 ಜುಲೈ 2023, 14:48 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ರಾಜ್ಯದ ಆರು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ ಇಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಶನಿವಾರದಿಂದ ಮಳೆಯ ಪ್ರಮಾಣ ಕೆಲವೆಡೆ ತಗ್ಗುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಇಲಾಖೆ ಶನಿವಾರವೂ ‘ಯೆಲ್ಲೋ ಅಲರ್ಟ್’ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT