ಸೋಮವಾರ, ಮಾರ್ಚ್ 27, 2023
31 °C

ವೆಬ್ ಗರ್ಡರ್ ಅಳವಡಿಕೆ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೈಯಪ್ಪನಹಳ್ಳಿ–ವೈಟ್‌ಫೀಲ್ಡ್‌ ಮೆಟ್ರೊ ರೈಲು ಮಾರ್ಗಕ್ಕೆ ಸವಾಲಾಗಿದ್ದ ವೆಬ್‌ ಗರ್ಡರ್‌ ಅಳವಡಿಕೆ ಕಾಮಗಾರಿಯನ್ನು ಕೊನೆಗೂ ಬಿಎಂಆರ್‌ಸಿಎಲ್ ಪೂರ್ಣಗೊಳಿಸಿದೆ.

ಬೆನ್ನಿಗಾನಹಳ್ಳಿ ಬಳಿ ಹಾದು ಹೋಗಿರುವ ಬೆಂಗಳೂರು–ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್‌ ಅಳವಡಿಸಲಾಗಿದೆ.

65 ಮೀಟರ್ ಉದ್ದ ಮತ್ತು 550 ಟನ್ ತೂಕದ ಈ ವೆಬ್ ಗರ್ಡರ್‌ಗೆ ಸ್ಪಿರಕಲ್ ಬೇರಿಂಗ್ ಬಳಸಲಾಗಿದೆ. ರೈಲು ಹಳಿಯಿಂದ 8.45 ಮೀಟರ್ ಎತ್ತರದಲ್ಲಿ ಯಶಸ್ವಿಯಾಗಿ ಅಳವಡಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಬೆಂಗಳೂರು ಮೆಟ್ರೊ ರೈಲು ಮಾರ್ಗದಲ್ಲಿ ಅಳವಡಿಕೆಯಾದ ಅತಿ ಉದ್ದದ ವೆಬ್ ಗರ್ಡರ್ ಇದಾಗಿದೆ. ಡಿಸೆಂಬರ್‌ ಕೊನೆ ವಾರದಲ್ಲಿ ಈ ಕಾಮಗಾರಿ ನಡೆಸಲು ಉದ್ದೇಶಿಸಲಾಗಿತ್ತು. ಸುರಕ್ಷತಾ ಕೆಲಸಗಳು ಪರಿಪೂರ್ಣವದ ಬಳಿಕವೇ ಈಗ ವೆಬ್ ಗರ್ಡರ್ ಅಳವಡಿಸಲಾಗಿದೆ.

ಬೈಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್‌ ಮಾರ್ಗಕ್ಕೆ ತೊಡಕಾಗಿದ್ದ ಈ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಬಾಕಿ ಕಾಮಗಾರಿ ವೇಗವಾಗಿ ನಡೆಯಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದೆಡೆ, ಕೆ.ಆರ್‌.ಪುರ–ವೈಟ್‌ಫೀಲ್ಡ್‌ ನಡುವೆ ಮೆಟ್ರೊ ರೈಲು ಸಂಚಾರ ಆರಂಭಿಸಲು ಸಿದ್ಧತೆಯನ್ನು ಬಿಎಂಆರ್‌ಸಿಎಲ್ ನಡೆಸುತ್ತಿದೆ. ಸುರಕ್ಷತೆ ಪರಿಶೀಲಿಸಲು ಮೆಟ್ರೊ ರೈಲು ಸುರಕ್ಷತಾ ಆಯುಕ್ತರನ್ನು ಶೀಘ್ರದಲ್ಲೇ ಆಹ್ವಾನಿಸಲು ಯೋಚಿಸಲಾಗುತ್ತಿದೆ ಎಂದೂ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು