ಬೆಂಗಳೂರು: ‘ನಗರದಲ್ಲಿರುವ ಪೇಯಿಂಗ್ ಗೆಸ್ಟ್ (ಪಿ.ಜಿ) ಕಟ್ಟಡಗಳ ಬಗ್ಗೆ ಮಾಹಿತಿ ದಾಖಲಿಸಲು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಮಾಹಿತಿ ಭರ್ತಿ ಮಾಡಲು ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ’ ಎಂದು ಕಮಿಷನರ್ ಬಿ. ದಯಾನಂದ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾರತ್‌ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ಯಶಸ್ವಿಯಾದರೆ, ನಗರದ ಎಲ್ಲ ಕಡೆಯೂ ವಿಸ್ತರಣೆ ಮಾಡಲಾಗುವುದು’ ಎಂದರು.
‘ನಗರದಲ್ಲಿ ಸುಮಾರು 5 ಸಾವಿರ ಪೇಯಿಂಗ್ ಗೆಸ್ಟ್ ಕಟ್ಟಡಗಳಿವೆ. ಇದರಲ್ಲಿ ಸುಮಾರು 4 ಲಕ್ಷ ಮಂದಿ ವಾಸಿಸುತ್ತಿದ್ದಾರೆ. ಅವರು ಯಾರು ? ಯಾವ ಕಾರಣಕ್ಕೆ ವಾಸವಿದ್ದಾರೆ ? ಏನು ಮಾಡುತ್ತಾರೆ ? ಸೇರಿದಂತೆ ಯಾವ ಮಾಹಿತಿಯೂ ನಿಖರವಾಗಿ ಲಭ್ಯವಿಲ್ಲ. ಈ ಎಲ್ಲ ಮಾಹಿತಿ ದಾಖಲಿಸಿಕೊಳ್ಳುವ ಉದ್ದೇಶದಿಂದಲೇ ಇದೀಗ ವೆಬ್ ಪೋರ್ಟಲ್ ಆರಂಭಿಸಲಾಗಿದೆ’ ಎಂದು ಹೇಳಿದರು.
‘ಮಾರತ್‌ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುಮಾರು 167 ಪೇಯಿಂಗ್ ಗೆಸ್ಟ್ ಕಟ್ಟಡಗಳಿವೆ. ಮಾಲೀಕರು, ಕಟ್ಟಡದಲ್ಲಿರುವ ವಾಸಿಗಳ ಬಗ್ಗೆ ಮಾಹಿತಿ ದಾಖಲಿಸುತ್ತಿದ್ದಾರೆ. ಪೊಲೀಸರು ಇದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.