ಬೆಂಗಳೂರು: ಪಶ್ಚಿಮ ಅಂಚೆ ವಿಭಾಗವು ಬಾಪ ಗ್ರಾಮ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ‘ಅಂಚೆ ಜನ ಸಂಪರ್ಕ ಅಭಿಯಾನ’ ಹಮ್ಮಿಕೊಂಡಿತ್ತು.
ಅಭಿಯಾನಕ್ಕೆ ಚಾಲನೆ ನೀಡಿದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ.ಡ್ಯಾಶ್ ಮಾತನಾಡಿ, ‘ಇಂದು ಕೇಂದ್ರ ಸರ್ಕಾರ ಉತ್ತಮ ಯೋಜನೆ ಹಮ್ಮಿಕೊಂಡಿದ್ದು, ಅಂಚೆ ಸೇವೆಯನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಕೋರಿದರು.
ಉಳಿತಾಯ ಖಾತೆ ತೆರೆಯುವಿಕೆ, ಐಪಿಪಿಬಿ ಖಾತೆ ತೆರೆಯುವಿಕೆ, ಆಧಾರ್ ನೋಂದಣಿ, ತಿದ್ದುಪಡಿ, ಉಳಿತಾಯ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ, ಮೈ ಸ್ಟಾಂಪ್, ಮೈಲ್ಸ್ , ಅಂಚೆ ಜೀವ ವಿಮೆ ಕುರಿತು ಮಾಹಿತಿಗಳನ್ನು ಒಂದೇ ಸೂರಿನಡಿಯಲ್ಲಿ ನೀಡಲಾಯಿತು.
ಅಂಚೆ ಉಳಿತಾಯ ಖಾತೆ ಪಾಸ್ ಪುಸ್ತಕ, ಅಂಚೆ ಜೀವ ವಿಮೆ ಪಾಲಿಸಿ ಬಾಂಡ್ ವಿತರಿಸಲಾಯಿತು.
ಬೆಂಗಳೂರು ಪಶ್ಚಿಮ ಅಂಚೆ ವಿಭಾಗದ ವರಿಷ್ಠ ಅಂಚೆ ಅಧೀಕ್ಷಕ ಬಿ.ಚಂದ್ರಕಾಂತ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್.ಎಸ್.ಸರಸ್ವತಿ, ಉಪಾಧ್ಯಕ್ಷೆ ಲಕ್ಷ್ಮಿದೇವಿ, ಉಪ ಅಂಚೆ ಅಧೀಕ್ಷಕರಾದ ಮೋಹನ್, ಹರಿರಾಂ, ಸುದರ್ಶನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.