ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪಶ್ಚಿಮ ಉಪವಿಭಾಗದ ಸಂಚಾರ ಪೊಲೀಸರು ಮೂವರು ಸವಾರರನ್ನು ಬಂಧಿಸಿದ್ದಾರೆ.

ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ (19), ಮಾಗಡಿ ರಸ್ತೆಯ ಚರಣ್(20) ಮತ್ತು ಮನೀಶ್(21) ಬಂಧಿತರು. ಆರೋಪಿಗಳಿಂದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿ ಮಾಡುವುದು ಹೆಚ್ಚಾಗಿದೆ. ಜಾಲತಾಣ ಮತ್ತು ಸಾರ್ವಜನಿಕರ ಮಾಹಿತಿ ಆಧರಿಸಿ ವ್ಹೀಲಿ ಮಾಡುವವರ ಪತ್ತೆಗೆ ಸಂಚಾರ ಪಶ್ಚಿಮ ಉಪವಿಭಾಗದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಒಂದು ಮತ್ತು ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಎರಡು ಸೇರಿ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣವರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.