ಉತ್ತರ ವಿಭಾಗದ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಒಂಬತ್ತು, ಯಲಹಂಕ ಠಾಣೆಯಲ್ಲಿ ಆರು ಮತ್ತು ಹೆಬ್ಬಾಳ ಠಾಣೆಯಲ್ಲಿ 18 ಪ್ರಕರಣಗಳು ದಾಖಲಾಗಿವೆ. ವ್ಹೀಲಿ ನಡೆಸುತ್ತಿದ್ದ 36 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆರು ಪ್ರಕರಣಗಳಲ್ಲಿ ಬಾಲಕರು ಭಾಗಿಯಾಗಿದ್ದು, ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ಚಾಲನಾ ಪರವಾನಗಿ (ಡಿ.ಎಲ್) ಅಮಾನತುಗೊಳಿಸುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.