ಬೈಕ್ ವ್ಹೀಲಿಂಗ್‌: ಯುವಕ ಸೆರೆ

7

ಬೈಕ್ ವ್ಹೀಲಿಂಗ್‌: ಯುವಕ ಸೆರೆ

Published:
Updated:

ಬೆಂಗಳೂರು: ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಸೂಫಿಯಾ (21) ಎಂಬಾತನನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಸಾರಕ್ಕಿ ನಿವಾಸಿಯಾದ ಸೂಫಿಯಾ, ಮೊಬೈಲ್ ಮಾರಾಟ ಹಾಗೂ ದುರಸ್ತಿ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. 

‘ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ವಾಹನಗಳ ಓಡಾಟ ಹೆಚ್ಚು. ಅಲ್ಲಿಯೇ ಆರೋಪಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ.  ಇತರೆ ವಾಹನಗಳ ಸವಾರರಿಗೆ ತೊಂದರೆ ಉಂಟು ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿಯ ಬಗ್ಗೆ ಸಾರ್ವಜನಿಕರೊಬ್ಬರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಬೈಕ್‌ ವ್ಹೀಲಿಂಗ್‌ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಆತನನ್ನು ಬಂಧಿಸಲಾಯಿತು. ಅವರ ಪೋಷಕರಿಗೆ ನೋಟಿಸ್‌ ನೀಡಲಾಗಿದೆ’ ಎಂದರು.

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !