ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಟ್‌ ಟಾಪಿಂಗ್ 3ನೇ ಹಂತಕ್ಕೆ ಒಪ್ಪಿಗೆ

Last Updated 2 ಜೂನ್ 2022, 20:19 IST
ಅಕ್ಷರ ಗಾತ್ರ

ಬೆಂಗಳೂರು: ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವೈಟ್‌ ಟಾಪಿಂಗ್ ಮೂರನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ ಸಿಕ್ಕಿದೆ. ಬಿಬಿಎಂಪಿ ಚುನಾವಣೆ ಸಮೀಪದಲ್ಲಿ ಇರುವಾಗ ಹಣಕಾಸು ಇಲಾಖೆ ಸೇರಿ ಹಲವು ಅನುಮತಿಗಳನ್ನು ಪಡೆಯುವ ಪ್ರಕ್ರಿಯೆ ಚುರುಕುಗೊಂಡಿದೆ.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ₹1,154 ಕೋಟಿ ವೆಚ್ಚದಲ್ಲಿ 89 ರಸ್ತೆಗಳನ್ನು(121.70 ಕಿಲೋ ಮೀಟರ್‌) ವೈಟ್‌ ಟಾಪಿಂಗ್ ಮಾಡುವ ಉದ್ದೇಶ ಹೊಂದಲಾಗಿತ್ತು. ಬಿಬಿಎಂಪಿ ಟೆಂಡರ್ ಪ್ರಕ್ರಿಯೆಯೂ ಆರಂಭವಾಗಿತ್ತು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಕೂಡಲೇ ಅನುದಾನ ಹಿಂಪಡೆದಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರನೇ ಹಂತದ ಆರೂ ಪ್ಯಾಕೇಜ್‌ಗಳಿಗೆ ಈಗ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಉನ್ನತ ಮೂಲಗಳು ಖಚಿತಪಡಿಸಿವೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಯೋಜನೆಗೆ ಸಮ್ಮತಿ ನೀಡಿದ್ದಾರೆ ಎಂದು ಹೇಳಿವೆ.

ಮೂರನೇ ಹಂತದಲ್ಲಿ ಗುರುತಿಸಿರುವ ರಸ್ತೆಗಳು ಬಹುತೇಕ ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲೇ ಹಾದು ಹೋಗಿದ್ದು, ಮುಖ್ಯಮಂತ್ರಿ ಅನುಮೋದನೆ ನೀಡಿರುವುದು ಆಡಳಿತ ಪಕ್ಷದ ಶಾಸಕರ ಅಸಮಾಧಾನಕ್ಕೆ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ.

ಸದ್ಯ ನಗರದಲ್ಲಿ 100 ಕಿಲೋ ಮೀಟರ್‌ನಷ್ಟು ರಸ್ತೆಗಳು ವೈಟ್‌ ಟಾಪಿಂಗ್ ಆಗಿವೆ. ‘ಡಾಂಬರ್ ರಸ್ತೆಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲವಾಗಿರುವುದರಿಂದ ವೈಟ್‌ ಟಾಪಿಂಗ್ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುವುದು ಸರಿಯಲ್ಲ. ವೈಟ್‌ ಟಾಪಿಂಗ್ ರಸ್ತೆಗಳು ನಗರದಲ್ಲಿ ಪ್ರವಾಹದ ಪ್ರಮಾಣ ಹೆಚ್ಚಿಸುತ್ತವೆ. ಅಲ್ಲದೇ ದೊಡ್ಡ ಪ್ರಮಾಣದಲ್ಲಿ
ಹಣ ಕೂಡ ವ್ಯರ್ಥವಾಗುತ್ತದೆ. ಡಾಂಬರ್ ರಸ್ತೆಗಳನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿರುವ
ದೇಶಗಳಿಗೆ ಹೋಗಿ ನಮ್ಮ ಎಂಜಿನಿಯರ್‌ಗಳು ಕಲಿಯುವ ಅಗತ್ಯವಿದೆ’ ಎಂದು ಐಐಎಸ್‌ಸಿ ಪ್ರಾಧ್ಯಾಪಕರೂ ಆಗಿರುವ ಸಿವಿಲ್ ಎಂಜಿನಿಯರಿಂಗ್ ತಜ್ಞ ಆಶಿಷ್ ವರ್ಮಾ ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT