ಸೋಮವಾರ, ಸೆಪ್ಟೆಂಬರ್ 26, 2022
20 °C

ಬೆಂಗಳೂರು: ಸಿ.ವಿ. ರಾಮನ್‌ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಶವಂತಪುರದ ಸಿ.ವಿ. ರಾಮನ್ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ಆಗಸ್ಟ್ 18ರಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಲಿದ್ದು, ಈ ಅವಧಿಯಲ್ಲಿ ಬಿಎಚ್‌ಇಎಲ್ ಜಂಕ್ಷನ್‌ನಿಂದ ಯಶವಂತಪುರ ವೃತ್ತದವರೆಗಿನ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

‘30 ದಿನಗಳವರೆಗೆ ಕಾಮಗಾರಿ ನಡೆಯಲಿದೆ. ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸಬೇಕು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

‘ಮಲ್ಲೇಶ್ವರ 18ನೇ ಅಡ್ಡರಸ್ತೆಯಿಂದ ಬರುವ ವಾಹನಗಳು, ಸರ್ಕಲ್ ಮಾರಮ್ಮ ದೇವಸ್ಥಾನ, ಮಾರ್ಗೋಸಾ ರಸ್ತೆ, 15ನೇ ಅಡ್ಡರಸ್ತೆ ಹಾಗೂ ಯಶವಂತಪುರ 8ನೇ ಮುಖ್ಯರಸ್ತೆ ಮೂಲಕ ಸಂಚರಿಸಬಹುದು. ಮೇಖ್ರಿ ವೃತ್ತದಿಂದ ಬರುವ ವಾಹನಗಳು, ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್, ಕುವೆಂಪು ವೃತ್ತ, ಬಿಇಎಲ್ ವೃತ್ತದ ಮೂಲಕ ಹೋಗಬಹುದು’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು