ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1.56 ಕೋಟಿ ಮೌಲ್ಯದ ವಸ್ತು ಜಪ್ತಿ

Last Updated 9 ಜೂನ್ 2022, 20:30 IST
ಅಕ್ಷರ ಗಾತ್ರ

ಬೆಂಗಳೂರು: ವೈಟ್‌ಫೀಲ್ಡ್ ವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಾಧ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ₹ 1.56 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

‘ಮನೆಗಳಲ್ಲಿ ಕಳ್ಳತನ, ಸರಗಳವು, ದ್ವಿಚಕ್ರ ವಾಹನ ಕಳ್ಳತನ ಸಂಬಂಧ ಪ್ರಕರಣಗಳು ದಾಖಲಾಗಿದ್ದವು. ಆಯಾ ಠಾಣೆ ಪೊಲೀಸರ ತಂಡಗಳು ತನಿಖೆ ನಡೆಸಿ, 22 ಆರೋಪಿಗಳನ್ನು ಬಂಧಿಸಿವೆ. ಅವರಿಂದ ಚಿನ್ನಾಭರಣ, ದ್ವಿಚಕ್ರ ವಾಹನ, ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಹೇಳಿದರು.

ಉಡುಗೊರೆ ನೀಡಲು ಕಳ್ಳತನ: ‘ಚಿನ್ನದಸರಗಳವು ಮಾಡುತ್ತಿದ್ದ ಆರೋಪಿಗಳಾದ ಶಕ್ತಿವೇಲ್ (19), ಎನ್‌.ವಿಜಯ್(19) ಎಂಬುವವರನ್ನು ಬಂಧಿಸಲಾಗಿದೆ. ಸಲುಗೆಯಿಂದಿದ್ದ ಮಹಿಳೆಯರಿಗೆ ಉಡುಗೊರೆ ನೀಡಲು ಕೃತ್ಯ ಎಸಗುತ್ತಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT