ಬೆಂಗಳೂರು: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದರೆ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.

ಜೆಡಿಎಸ್ ಕಚೇರಿಯಲ್ಲಿ ನಡೆದ ಬಿಜೆಪಿ–ಜೆಡಿಎಸ್ ಜಂಟಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಕಾಂಗ್ರೆಸ್‌ನವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು. ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು ಎಂಬುದು ಕಾಂಗ್ರೆಸ್ ನೀತಿ’ ಎಂದರು.

‘ಕಾಂಗ್ರೆಸ್ ಸರ್ಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಮಾರಾಟಕ್ಕೆ ಇಟ್ಟಿದೆ. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ. ಪಕ್ಷದ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ’ ಎಂದು ಟೀಕಿಸಿದರು.

ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ರಾಜ್ಯದಲ್ಲಿ ಕಾನೂನು– ಸುವ್ಯವಸ್ಥೆ ಕುಸಿದಿದೆ. ಈ ಸರ್ಕಾರ. ಕೇವಲ ಒಂದು ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಕೊಲೆ, ಸುಲಿಗೆ, ಅತ್ಯಾಚಾರದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ನವರು ಭಂಡತನದವರು, ಅವರಿಗೆ ಸೂಕ್ಷ್ಮತೆಯೇ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.