ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಪ್‌ಸ್ಟಿಕ್ ಹಚ್ಚಿಕೊಳ್ಳುವ ಗಂಡ: ಠಾಣೆ ಮೆಟ್ಟಿಲೇರಿದ ಪತ್ನಿ

Last Updated 1 ಏಪ್ರಿಲ್ 2023, 6:15 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನ ಗಂಡ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ. ಹೆಂಗಸರ ಒಳಉಡುಪು ತೊಟ್ಟುಕೊಂಡು ವಿಚಿತ್ರವಾಗಿ ವರ್ತಿಸುತ್ತಾರೆ. ದಿನದಿಂದ ದಿನಕ್ಕೆ ಅವರ ವರ್ತನೆ ಬದಲಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಕುಮಾರಸ್ವಾಮಿ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ 25 ವರ್ಷದ ಮಹಿಳೆ ದೂರು ನೀಡಿದ್ದಾರೆ. ವರದಕ್ಷಿಣೆಗಾಗಿ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಪತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ದೂರಿನ ವಿವರ: ‘ವೈವಾಹಿಕ ಜಾಲತಾಣದ ಮೂಲಕ ಪರಿಚಯವಾಗಿ ಮದುವೆಯಾಗಿದ್ದೆ. ಮೊದಲ ದಿನದಿಂದಲೂ ವಿಚಿತ್ರವಾಗಿ ವರ್ತಿಸುತ್ತಿರುವ ಪತಿ, ತಮಗೆ ಪುರುಷರೆಂದರೆ ಇಷ್ಟವೆಂದು ಕೂಗಾಡುತ್ತಾರೆ. ಅದನ್ನು ಪ್ರಶ್ನಿಸಿದರೆ, ಮನೆ ಬಿಟ್ಟು ಹೋಗುವಂತೆ ಹಾಗೂ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಹಲವು ಬಾರಿ ಹಲ್ಲೆ ಸಹ ಮಾಡಿದ್ದಾರೆ’ ಎಂದು ದೂರಿನಲ್ಲಿ ಮಹಿಳೆ
ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT