ಬುಧವಾರ, ಜನವರಿ 27, 2021
16 °C

ಕತ್ತು ಕೊಯ್ದು ಪತ್ನಿಯ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಧೂಪಿದೇವಿ (47) ಎಂಬುವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಅವರ ಪತಿ ರಾಮ್ ಬಹದ್ದೂರ್ ಪಾಠಕ್ (50) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ನೇಪಾಳದ ದಂಪತಿ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಐಸ್‌ ಕ್ರೀಂ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೊರಮಾವು ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮದ್ಯವ್ಯಸನಿಯಾಗಿದ್ದ ಆರೋಪಿ ರಾಮ್, ನಿತ್ಯವೂ ಕುಡಿದು ಮನೆಗೆ ಬಂದು ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದರು. ಶುಕ್ರವಾರ ರಾತ್ರಿಯೂ ಆರೋಪಿ ಮದ್ಯ ಕುಡಿದು ಮನೆಗೆ ಬಂದು ಪತ್ನಿಗೆ ಬೈಯುತ್ತಿದ್ದರು. ಹಲ್ಲೆಗೂ ಯತ್ನಿಸಿದ್ದರು.’

‘ಪತಿಯನ್ನು ಪ್ರಶ್ನಿಸಿದ್ದ ಧೂಪಿದೇವಿ, ಜಗಳ ಮಾಡಬೇಡಿ ಎಂದು ಗೋಳಾಡಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ, ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದಿದ್ದರು. ಕುಸಿದು ಬಿದ್ದ ಧೂಪಿದೇವಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಲಾಟೆ ಕಂಡು ಮಕ್ಕಳು ಚೀರಾಡುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದರು’ ಎಂದೂ ಪೊಲೀಸರು ತಿಳಿಸಿದರು.

‘ಕುಡಿದ ಅಮಲಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಹೇಳುತ್ತಿದ್ದಾನೆ. ದಂಪತಿಯ ಮೂರು ಮಕ್ಕಳು ಅನಾಥರಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು