ಬುಧವಾರ, ಡಿಸೆಂಬರ್ 8, 2021
18 °C

ಪತ್ನಿ ಕೊಂದು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೋಜಾ (28) ಎಂಬುವರನ್ನು ಕೊಂದು, ಅವರ ಪತಿ ಮಂಜುನಾಥ್ (36) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ತಿಗರಳಪಾಳ್ಯದ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಅದೇ ಮನೆಯಲ್ಲೇ ದಂಪತಿ ಮೃತದೇಹಗಳು ಭಾನುವಾರ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕನಕಪುರ ಸಾತನೂರಿನ ಮಂಜುನಾಥ್ ಹಾಗೂ ಮಳವಳ್ಳಿಯ ರೋಜಾ, ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ಮಕ್ಕಳು ಆಗಿರಲಿಲ್ಲ. ಮದ್ಯ ವ್ಯಸನಿ ಆಗಿದ್ದ ಮಂಜುನಾಥ್, ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಯನ್ನು ಥಳಿಸುತ್ತಿದ್ದ. ’

‘ಶನಿವಾರ ರಾತ್ರಿಯೂ ದಂಪತಿ ನಡುವೆ ಜಗಳ ಆಗಿದೆ. ಇದೇ ಸಂದರ್ಭದಲ್ಲೇ ಆರೋಪಿ, ಪತ್ನಿಯನ್ನು ಕೊಲೆ ಮಾಡಿದ್ದಾನೆ. ನಂತರ, ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

‘ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಸಿಬ್ಬಂದಿ ಮನೆಗೆ ಹೋಗಿದ್ದರು. ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸ್ಥಳೀಯರ ಸಮ್ಮುಖದಲ್ಲಿ ಬಾಗಿಲು ಒಡೆಯಲಾಯಿತು. ನೇಣು ಬಿಗಿದ ಸ್ಥಿತಿಯಲ್ಲಿ ಮಂಜುನಾಥ್ ಮೃತದೇಹವಿತ್ತು. ಕೊಠಡಿಯಲ್ಲಿ ಪತ್ನಿ ಮೃತದೇಹ ಕಂಡಿತು’ ಎಂದೂ ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು