ಶನಿವಾರ, ಜುಲೈ 24, 2021
22 °C
ಪ್ರೀತಿಸಿ ಮದುವೆಯಾಗಿದ್ದ ದಂಪತಿ * ಮರಣೋತ್ತರ ಪರೀಕ್ಷೆ ವರದಿಯಿಂದ ಸಿಕ್ಕಿಬಿದ್ದ ಆರೋಪಿ

ಮದ್ಯದ ಪಾರ್ಟಿ | ಪತ್ನಿಯನ್ನೇ ಕೊಂದ ಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ವೆಂಕಟಲಕ್ಷ್ಮಿ (26) ಎಂಬುವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಪತಿ ಸುರೇಶ್‌ನನ್ನು (32) ಪೊಲೀಸರು ಬಂಧಿಸಿದ್ದಾರೆ.

‘ತಮಿಳುನಾಡಿನ ಸುರೇಶ್, ಟೇಲರಿಂಗ್ ಕೆಲಸ ಮಾಡುತ್ತಿದ್ದ. ಪತ್ನಿ ವೆಂಕಟಲಕ್ಷ್ಮಿ ಹಾಗೂ ನಾಲ್ಕು ವರ್ಷದ ಗಂಡು ಮಗುವಿನ ಜೊತೆ ಹೊಂಗಸಂದ್ರದ ಶ್ರೀನಿವಾಸ್ ಲೇಔಟ್‌ನಲ್ಲಿ ವಾಸವಿದ್ದ’ ಎಂದು ಪೊಲೀಸರು ಹೇಳಿದರು.

‘ಜೂನ್ 7ರಂದು ದಂಪತಿ ಮದ್ಯದ ಪಾರ್ಟಿ ಮಾಡಿದ್ದರು. ಕುಡಿದ ಅಮಲಿನಲ್ಲೇ ಜಗಳ ಆರಂಭಿಸಿದ್ದರು. ’ನನ್ನ ಜೀವನವನ್ನೇ ನೀನು ಹಾಳು ಮಾಡಿದಿ. ನನ್ನನ್ನು ಚೆನ್ನಾಗಿ ನೋಡಿಕೊಳ್ಳುತಿಲ್ಲ’ ಎಂದು ಪತ್ನಿ ವೆಂಕಟಲಕ್ಷ್ಮಿ ದೂರಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ  ಸುರೇಶ್, ಕೊಠಡಿಗೆ ಹೋಗಿ ಮಲಗಿದ್ದರು.’

‘ತಡರಾತ್ರಿ 1 ಗಂಟೆ ಸುಮಾರಿಗೆ ಸುರೇಶನ ಜೊತೆ ವೆಂಕಟಲಕ್ಷ್ಮಿ ಪುನಃ ಜಗಳ ತೆಗೆದಿದ್ದರು. ಅದೇ ಸಂದರ್ಭದಲ್ಲೇ ಸುರೇಶ್, ಚಾಕುವಿನಿಂದ ಪತ್ನಿಯ ಕತ್ತು ಕೊಯ್ದಿದ್ದ. ಸ್ಥಳದಲ್ಲೇ ಒದ್ದಾಡಿ ವೆಂಕಟಲಕ್ಷ್ಮಿ ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.

‘ಪತ್ನಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿ ಸುರೇಶ್ ಪೊಲೀಸರಿಗೆ ಸುಳ್ಳು ಹೇಳಿದ್ದ. ಮರಣೋತ್ತರ ಪರೀಕ್ಷೆ ವರದಿ ಬಂದಾಗ ಇದೊಂದು ಕೊಲೆ ಎಂಬುದು ತಿಳಿಯಿತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡ’ ಎಂದು ತಿಳಿಸಿದರು.

ಮಗು ಅನಾಥ: ಸುರೇಶ್ ಹಾಗೂ ವೆಂಕಟಲಕ್ಷ್ಮಿ ಪರಸ್ಪರ ಪ್ರೀತಿಸಿ 6 ವರ್ಷಗಳ ಹಿಂದೆ ಮದುವೆ ಆಗಿದ್ದರು. ಪತ್ನಿಯನ್ನು ಕೊಂದ ಪತಿ ಇದೀಗ ಜೈಲು ಸೇರಿದ್ದಾನೆ. ದಂಪತಿಯ ಗಂಡು ಮಗು ಅನಾಥವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು