ಭಾನುವಾರ, ಜನವರಿ 26, 2020
18 °C

ಪತಿ ಮೇಲೆ ಪತ್ನಿ ಮನೆಯವರಿಂದ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಕಡೆಯವರು ರಸ್ತೆಯಲ್ಲೇ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪತಿ ಬಾಣಸವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಾರುತಿ ಸೇವಾನಗರದ ವಿನೋದ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಪತ್ನಿ, ಆಕೆಯ ತಾಯಿ ಮತ್ತು ಸಹೋದರ ವಿರುದ್ಧ  ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನೋದ್ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ.

2019ರಲ್ಲಿ ವಿನೋದ್ ಅವರು ವಿವಾಹವಾಗಿದ್ದರು. ದಂಪತಿ ಮದ್ಯೆ ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಇತ್ತೀಚೆಗೆ ಹೆರಿಗೆಗೆಂದು ತವರಿಗೆ ಹೋಗಿದ್ದರು. ಜ. 9ರಂದು ವಿನೋದ್ ಮನೆಯ ಬಳಿ ಬಂದ ಪತ್ನಿಯ ಮನೆಯವರು ಕೌಟುಂಬಿಕ ವಿಚಾರವಾಗಿ ಜಗಳ ಮಾಡಿದ್ದರು. ಮನೆ ಮುಂದಿನ ರಸ್ತೆಗೆ ಕರೆಕೊಂಡು ಬಂದು ಹಲ್ಲೆ ನಡೆಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು