ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ ಜೈಲಿಗೆ ವಿಲ್ಸನ್‌ ಗಾರ್ಡನ್‌ ನಾಗ ಸ್ಥಳಾಂತರ?

Published : 17 ಸೆಪ್ಟೆಂಬರ್ 2024, 20:03 IST
Last Updated : 17 ಸೆಪ್ಟೆಂಬರ್ 2024, 20:03 IST
ಫಾಲೋ ಮಾಡಿ
Comments

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಅಲಿಯಾಸ್‌ ನಾಗರಾಜ್‌ನನ್ನು ಕಲಬುರಗಿ ಅಥವಾ ಉತ್ತರ ಕರ್ನಾಟಕ ಭಾಗದ ಯಾವುದಾರೂ ಜಿಲ್ಲೆಯ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಹಾಗೂ ಸಿದ್ದಾಪುರ ಮಹೇಶ್‌ ಕೊಲೆ ಪ್ರಕರಣದಲ್ಲಿ ವಿಲ್ಸನ್‌ ನಾಗನನ್ನು ಬಂಧಿಸಲಾಗಿತ್ತು. ಜೈಲಿನಲ್ಲಿ ಇಬ್ಬರೂ ವಿಶೇಷ ಆತಿಥ್ಯ ಪಡೆದುಕೊಂಡಿದ್ದರು. ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದು, ಸಿಸಿಬಿ ಜಂಟಿ ಪೊಲೀಸ್‌ ಕಮಿಷನರ್ ಚಂದ್ರಗುಪ್ತ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ವಿಶೇಷ ಆತಿಥ್ಯ ನೀಡಿದ ಫೋಟೊ ಸಹ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.

‘ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ನಟ ದರ್ಶನ್‌ಗೆ ವಿಶೇಷ ಆತಿಥ್ಯದ ಜವಾಬ್ದಾರಿಯನ್ನು ನಾಗ ವಹಿಸಿಕೊಂಡಿದ್ದ. ವಿಚಾರಣೆ ವೇಳೆ ಈ ವಿಷಯ ಗೊತ್ತಾಗಿತ್ತು. ನಾಗನನ್ನು ಬೇರೆ ಜೈಲಿಗೆ ಕಳುಹಿಸಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಅನುಮತಿ ನೀಡಿದ್ದು ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ’ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಿದ್ದಾಪುರ ಮಹೇಶ್ ಎಂಬಾತನನ್ನು ನಾಗ ಹಾಗೂ ಸಹಚರರು ಕೊಲೆ ಮಾಡಿದ್ದರು ಎಂಬ ಆರೋಪವಿದೆ. ಈ ಪ್ರಕರಣದಲ್ಲಿ ನಾಗ ಹಾಗೂ ಆತನ 20 ಮಂದಿ ಸಹಚರರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT