ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳಿ, ಹವಾಮಾನ ವೈಪರೀತ್ಯ: ಅನಾರೋಗ್ಯ, ತೀವ್ರ ಉಸಿರಾಟದ ಸಮಸ್ಯೆ ಶೇ 15ರಷ್ಟು ಹೆಚ್ಚಳ

Last Updated 29 ಡಿಸೆಂಬರ್ 2022, 4:40 IST
ಅಕ್ಷರ ಗಾತ್ರ

ಬೆಂಗಳೂರು: ಚಳಿ ಹಾಗೂ ಹವಾಮಾನ ವೈಪರೀತ್ಯದಿಂದ ನಗರದಲ್ಲಿ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹಾಗೂತೀವ್ರ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳು ಶೇ 15ರಷ್ಟು ಹೆಚ್ಚಳವಾಗಿವೆ.

ಈ ಸಮಸ್ಯೆ ಎದುರಿಸುತ್ತಿರುವವರಿಗೆ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ (ಆರ್‌ಜಿಐಸಿಡಿ)ಚಿಕಿತ್ಸೆ ಒದಗಿಸಲಾಗುತ್ತಿದೆ. ಐಎಲ್‌ಐ, ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಂಸ್ಥೆಗೆ ಪ್ರತಿನಿತ್ಯ 200ಕ್ಕೂ ಅಧಿಕ ಹೊರರೋಗಿಗಳು ಭೇಟಿ ನೀಡುತ್ತಿದ್ದು, ಅವರಲ್ಲಿ ಶೇ 50ರಷ್ಟು ಮಂದಿ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರೇ ಆಗಿದ್ದಾರೆ.

ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಕೋವಿಡ್ ಪರೀಕ್ಷೆಗಳಲ್ಲಿ ಪ್ರತಿನಿತ್ಯ ಒಂದೆರಡು ಕೋವಿಡ್ ಪ್ರಕರಣಗಳು ದೃಢಪಡುತ್ತಿವೆ. ಸೋಂಕಿತರಾದವರಿಗೆ200 ಹಾಸಿಗೆಗಳ ಮೇಕ್‌ ಶಿಫ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ.

ಕೋವಿಡ್ ಹೆಚ್ಚಳವಿಲ್ಲ: ‘ಚಳಿಗಾಲದ ಅವಧಿಯಲ್ಲಿ ವಾತಾವರಣದಲ್ಲಿ ತೇವಾಂಶ ಇರುವುದರಿಂದ ಐಎಲ್‌ಐ, ಸಾರಿ ಪ್ರಕರಣಗಳು ಸಹಜವಾಗಿ ಹೆಚ್ಚಳವಾಗುತ್ತವೆ. ಪ್ರತಿ ವರ್ಷ ಈ ವೇಳೆ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗುತ್ತವೆ. ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗಿಲ್ಲ. ಕೊರೊನಾ ಸೋಂಕು ತಗುಲಿದವರಿಗೂ ತೀವ್ರತೆ ಕಡಿಮೆ ಇರುವುದರಿಂದ ವಿಶೇಷ ಚಿಕಿತ್ಸೆ ಇಲ್ಲದೆಯೇ ಚೇತರಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಆತಂಕಪಡುವ ಅಗತ್ಯವಿಲ್ಲ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ. ನಾಗರಾಜ್ ತಿಳಿಸಿದರು.

‘ಚೀನಾದಲ್ಲಿ ಲಸಿಕಾಕರಣ ಸರಿಯಾದ ರೀತಿಯಲ್ಲಿ ನಡೆದಿರಲಿಲ್ಲ. ಕೋವಿಡ್ ನಿಯಮಾವಳಿಯೂ ಸಮರ್ಪಕವಾಗಿ ಅಲ್ಲಿ ಪಾಲನೆಯಾಗಿಲ್ಲ. ಇದರಿಂದಾಗಿ ಅಲ್ಲಿ ಪ್ರಕರಣಗಳು ಹೆಚ್ಚಿ, ವೈರಾಣು ಜೀವಕ್ಕೆ ಅಪಾಯವನ್ನು ತಂದೊಡ್ಡಿತು. ನಮ್ಮಲ್ಲಿ ಲಸಿಕಾಕರಣ ಉತ್ತಮವಾಗಿ ನಡೆದಿದ್ದರಿಂದ ಪ್ರತಿಕಾಯಗಳು ಅಭಿವೃದ್ಧಿ ಹೊಂದಿವೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT