ಬೆಂಗಳೂರು; ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರ ತಡರಾತ್ರಿ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು, ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣಿಸಿದರು.
ಇದೇ ವೇಳೆ ಆಟೋ ಚಾಲಕ, ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಗೋದಾಮು ಬಳಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಸಂತ್ರಸ್ತೆ ಅರೆ ಪ್ರಜ್ಞಾವಸ್ಥೆಯಲ್ಲಿ ತನ್ನ ಸ್ನೇಹಿತೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ನೇಹಿತೆ ಬಂದು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ವೈದ್ಯಕೀಯ ಪರೀಕ್ಷೆ; ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದು ನಿಜ. ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ ಎಂದ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.