ಬೆಂಗಳೂರು: ನಗರದ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಪೊಲೀಸ್ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನ್‌ಸ್ಟೇಬಲ್‌ಗಳಾದ ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆ ಮಾಡಿಕೊಂಡವರು.
ಬುಧವಾರ ರಾತ್ರಿಯಷ್ಟೇ ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಎಂಬುವರು ನಿಗೂಢವಾಗಿ ಸಾವಿಗೀಡಾಗಿದ್ದು, ಇದರ ಬೆನ್ನಲ್ಲೇ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾನ್‌ಸ್ಟೆಬಲ್ಗಳಾಗಿದ್ದ ಇಬ್ಬರೂ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದರು. ಮಕ್ಕಳಾಗಿರಲಿಲ್ಲ ಎಂಬ ಕೊರಗು ಅವರಿಗೆ ಇತ್ತು. ನಿಯಂತ್ರಣ ಕೊಠಡಿಯಲ್ಲಿ ಶೀಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಪಿಗೆಹಳ್ಳಿ ಎಸಿಪಿ ಉಪವಿಭಾಗದ ಕಚೇರಿಯಲ್ಲಿ ಬರಹಗಾರರಾಗ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.
ಕರ್ತವ್ಯ ನಿರ್ವಹಿಸಿ ಮನೆಗೆ ಹೋದ ಸುರೇಶ್ ಹಾಗೂ ಶೀಲಾ, ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಮಕ್ಕಳಾಗದ ಹಿನ್ನೆಲೆ ಮನನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.