ಬೆಂಗಳೂರು: ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹವನ್ನು ಕಸದ ರಾಶಿಗೆ ಎಸೆದು ಹೋಗಿರುವ ಘಟನೆ ಕೆಂಗೇರಿಯ ಮೈಲಸಂದ್ರದಲ್ಲಿ ನಡೆದಿದೆ.

ಮಹದೇಶ್ವರ ಬಡಾವಣೆಯ ನಿವಾಸಿ ಕೆಂಪಮ್ಮ (45) ಕೊಲೆಯಾದ ಮಹಿಳೆ.

ಹಳೇ ದ್ವೇಷದ ಕಾರಣಕ್ಕೆ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

ಕೆಂಗೇರಿ ಮುಖ್ಯರಸ್ತೆಯ ಮೈಲಸಂದ್ರದ ಬಸ್ ನಿಲ್ದಾಣದ ಹಿಂಭಾಗದ ಕಸದ ರಾಶಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

‘ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆ ಪಕ್ಕದ ಕಸದ ರಾಶಿಯಲ್ಲಿ ಎಸೆದಿದ್ದಾರೆ. ಸೋಮವಾರ ಮುಂಜಾನೆ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರು ಕಸದ ರಾಶಿಯಲ್ಲಿ ಮೃತದೇಹ ಇರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು’ ಎಂದು ಮೂಲಗಳು ಹೇಳಿವೆ.

ತಲೆಗೆ ಬಲವಾದ ಪೆಟ್ಟು: ‘ಮಹಿಳೆಯ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಬೇರೆಡೆ ಕೊಲೆ ಮಾಡಿ, ಮೃತದೇಹವನ್ನು ಮೈಲಸಂದ್ರದ ಬಸ್ ನಿಲ್ದಾಣದ ಹಿಂಭಾಗಕ್ಕೆ ತಂದು ಆರೋಪಿಗಳು ಎಸೆದು ಹೋಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಕೃತ್ಯ ನಡೆದ ಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

‘ಕೊಲೆಯಾದ ಮಹಿಳೆಯ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಕೃತ್ಯ ಎಸಗಲು ಕಾರಣ ಏನು ಎಂಬುದು ಪತ್ತೆಯಾಗಿಲ್ಲ. ಹಳೆಯ ದ್ವೇಷ ಅಥವಾ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.