ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಬಸ್ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ

ಮನೆಗೆ ಡ್ರಾಪ್‌ ಕೊಡುವ ನೆಪದಲ್ಲಿ ಕರೆದೊಯ್ದು ಕೃತ್ಯ
Last Updated 30 ನವೆಂಬರ್ 2022, 20:00 IST
ಅಕ್ಷರ ಗಾತ್ರ

ಬೆಂಗಳೂರು: ಮನೆಗೆ ಡ್ರಾಪ್‌ ಕೊಡುವ ನೆಪದಲ್ಲಿ ಮಹಿಳೆಯನ್ನು ಶಾಲಾ ಬಸ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದು ಆರೋಪಿ ಶಾಲಾ ಬಸ್‌ ಚಾಲಕ ಶಿವಕುಮಾರ್ ಎಂಬಾತನನ್ನು ಚಂದ್ರಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ಈ ಕೃತ್ಯ ನಡೆದಿದೆ. ‌

‘ನಾಯಂಡಹಳ್ಳಿ ವೃತ್ತದ ಬಳಿ ಮಹಿಳೆ ಬಸ್‌ಗೆ ಕಾಯುತ್ತಿದ್ದರು. ಅದೇ ವೇಳೆಯಲ್ಲಿ ಶಾಲಾ ಮಕ್ಕಳನ್ನು ಮನೆಗೆ ಬಿಟ್ಟು ವಾಪಸ್‌ ಬರುತ್ತಿದ್ದ ಚಾಲಕ, ಮಹಿಳೆಗೆ ಡ್ರಾಪ್‌ ಕೊಡುವ ನೆಪದಲ್ಲಿ ಬಸ್‌ ಹತ್ತಿಸಿಕೊಂಡಿದ್ದ. ಬಸ್‌ನಲ್ಲಿ ಚಾಲಕ ಬಿಟ್ಟರೆ ಬೇರೆ ಯಾರೂ ಇರಲಿಲ್ಲ. ಬಸ್ ಅನ್ನು ಚಾಲಕ ನಾಗರಬಾವಿಯ ಸೇವಾ
ರಸ್ತೆಯ ನಿರ್ಜನ ಪ್ರದೇಶಕ್ಕೆ ಮಹಿಳೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಸಂತ್ರಸ್ತ ಮಹಿಳೆ ತನ್ನ ಮೊಬೈಲ್‌ನಲ್ಲಿ ಶಾಲಾ ಬಸ್‌ನ ಫೋಟೊ ತೆಗೆದು ಪುತ್ರನಿಗೆ ಕಳುಹಿಸಿದ್ದರು. ಜೊತೆಗೆ ಮಗನಿಗೆ ಕರೆ ಮಾಡಿಯೂ ವಿಷಯ ತಿಳಿಸಿದ್ದರು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸಂತ್ರಸ್ತ ಮಹಿಳೆಯ ಪುತ್ರ ಆರೋಪಿಯನ್ನು ಪತ್ತೆಹಚ್ಚಿ ಪೊಲೀಸರಿಗೆ ಮಾಹಿತಿ
ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT