ಗುರುವಾರ , ಡಿಸೆಂಬರ್ 3, 2020
24 °C

ಸಂಪ್‍ನಲ್ಲಿ ಮಹಿಳೆ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಲೀಕರ ಮನೆಯ ಸಂಪ್‍ನಲ್ಲಿ 57 ವರ್ಷದ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಮೃತರನ್ನು ಮನೆಕೆಲಸ ಮಾಡುತ್ತಿದ್ದ ಸಾಕಮ್ಮ ಎಂದು ಗುರುತಿಸಲಾಗಿದೆ. ದಾಸರಹಳ್ಳಿ ಮೆಟ್ರೊ ನಿಲ್ದಾಣದ ಬಳಿ ಇರುವ ಉದ್ಯಮಿಯೊಬ್ಬರ ಮನೆಯಲ್ಲಿ ಈಕೆ ಕೆಲಸ ಮಾಡುತ್ತಿದ್ದರು.

ದುರ್ವಾಸನೆ ಬರುತ್ತಿರುವುದನ್ನು ಮನೆಯ ಸಿಬ್ಬಂದಿ ಗಮನಿಸಿ, ನೀರಿನ ಸಂಪ್ ತೆರೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

'ತಾಯಿ ಕಾಣೆಯಾಗಿದ್ದಾರೆ ಎಂದು ಮೃತರ ಮಗ ಎರಡು ದಿನದ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು. ಸಾಕಮ್ಮ ಕಾಲು ಜಾರಿ ಸಂಪ್‍ನೊಳಗೆ ಬಿದ್ದಿರಬಹುದು ಅಥವಾ ಆತ್ಮಹತ್ಯೆಗೂ ಯತ್ನಿಸಿರಬಹುದು. ಈ ಕುರಿತು ತನಿಖೆ ನಡೆಯುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.