‘ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರಿನ ಕೆ.ಸಿ. ವಿನುತಾ ಅವರನ್ನು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸುವಂತೆ ಶಾಸಕರು ಮನವಿ ಮಾಡಿರುವಂತೆ ಶಾಸಕರ ಲೆಟರ್‌ಹೆಡ್‌ನಲ್ಲಿ ಪತ್ರ ತಯಾರಿಸಿ, ಸಹಿ ಮಾಡಿ ವಿಧಾನಸಭಾ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರೇ ನೀಡಿರುವ ಪತ್ರವೆಂದು ಭಾವಿಸಿದ್ದ ಸಚಿವಾಲಯದ ಅಧಿಕಾರಿಗಳು, ವಿನುತಾ ಅವರನ್ನು ಆಪ್ತ ಸಹಾಯಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು. ಬಳಿಕ ತಾವು ಪತ್ರ ನೀಡಿಲ್ಲ, ಅದು ನಕಲಿ ಎಂದು ಶಿವಶಂಕರಪ್ಪ ಅವರು ವಿಧಾನಸಭಾ ಸಚಿವಾಲಯದ ಗಮನಕ್ಕೆ ತಂದರು’ ಎಂದು ಪೊಲೀಸರು ತಿಳಿಸಿದ್ದಾರೆ.