ಬುಧವಾರ, ಮೇ 25, 2022
31 °C

ಬ್ಯಾಪಿಸ್ಟ್‌ ಆಸ್ಪತ್ರೆಯಲ್ಲಿ ಡಬ್ಲ್ಯೂಸಿಎಚ್‌ಆರ್‌ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾಯಿ ಮತ್ತು ಮಗುವಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ನಗರದ ಬ್ಯಾಪಿಸ್ಟ್‌ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ಆರೋಗ್ಯ ಸಂಶೋಧನಾ ಕೇಂದ್ರ (ಡಬ್ಲ್ಯೂಸಿಎಚ್‌ಆರ್‌ಸಿ) ಆರಂಭವಾಗಿದೆ. 

‘ನೂತನ ಕೇಂದ್ರದಲ್ಲಿ ಒಳ ಹಾಗೂ ಹೊರ ರೋಗಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರುವ 23 ಹಾಸಿಗೆ ಸಾಮರ್ಥ್ಯದ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್‌ಐಸಿಯು), 11 ಹಾಸಿಗೆ ಸಾಮರ್ಥ್ಯದ ಮಕ್ಕಳ ತೀವ್ರ ನಿಗಾ ಘಟಕ, ಮೂರು ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ಸಿಬ್ಬಂದಿ ಮತ್ತು ಹೆರಿಗೆ ಕೊಠಡಿಗಳೂ ಈ ಕೇಂದ್ರದಲ್ಲಿವೆ. ಬ್ಯಾಪಿಸ್ಟ್‌ ಆಸ್ಪತ್ರೆಯಲ್ಲಿ ಈಗ ಎಲ್ಲ ಸೌಕರ್ಯಗಳೂ ಒಂದೇ ಸೂರಿನಡಿ ಸಿಗಲಿವೆ’ ಎಂದು ಪ್ರಕಟಣೆ ತಿಳಿಸಿದೆ.  

‘ಬ್ಯಾಪಿಸ್ಟ್‌ ಆಸ್ಪತ್ರೆಯು ಅಮೆರಿಕದ ಬೇಲಾರ್‌ ವಿಶ್ವವಿದ್ಯಾಲಯ ಹಾಗೂ ಲಿವಿಂಗ್‌ ಆ್ಯಂಡ್‌ ಲರ್ನಿಂಗ್‌ ಸೆಂಟರ್‌ (ಎಲ್‌ಎಲ್‌ಸಿ) ಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಅನ್ವಯ ಶುಶ್ರೂಷಕಿಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಸ್ಮಾರ್ಟ್‌ ತರಗತಿ ಕೋಣೆಗಳು, ಇ–ಕೆಫೆ ಹಾಗೂ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಇದರಿಂದ ಶುಶ್ರೂಷಕಿಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು