ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ 1ರ ಬಳಿಯ ಕಾಂಪೌಂಡ್ ಪಕ್ಕದಲ್ಲಿ ಸುಟ್ಟ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಪ್ರಾಥಮಿಕ ತನಿಖೆಯಲ್ಲಿ ಬೇರೆ ಕಡೆಯಿಂದ ಮೃತದೇಹ ತಂದಿರುವ ಬಗ್ಗೆ ಕುರುಹುಗಳಿಲ್ಲ. ಮಹಿಳೆಯ ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಕೊಲೆ ಮಾಡಿ ಬಳಿಕ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆ ಯಾರು? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ? ಎಂಬುದರ ತನಿಖೆ ಆರಂಭಿಸಲಾಗಿದೆ’ ಎಂದು ರೈಲ್ವೆ ಎಸ್ಪಿ ಎಸ್.ಕೆ. ಸೌಮ್ಯಲತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.