ಮೃತದೇಹವನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೃದ್ದೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆಯತಪ್ಪಿ ಮೋರಿಗೆ ಬಿದ್ದು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.