ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೌಟುಂಬಿಕ ಕಲಹ: ವಿವಾಹಿತೆ ಆತ್ಮಹತ್ಯೆ

Published 5 ಜುಲೈ 2024, 15:47 IST
Last Updated 5 ಜುಲೈ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಗಂಗಮ್ಮನಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂಜಾ (26) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

‘ಪೂಜಾ ಹಾಗೂ ಅವರ ಪತಿ ಸುನೀಲ್‌ ಎಂಬಿಎ ಪದವೀಧರರು. ಇಬ್ಬರೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣದ ಸಂಬಂಧ ಸುನೀಲ್‌, ಅವರ ತಮ್ಮ ಅನಿಲ್‌ ಸೇರಿದಂತೆ ಆರು ಮಂದಿ ವಿರುದ್ಧ ವರದಕ್ಷಿಣೆ ಕಿರುಕುಳದ ಅಡಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.

‘ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಪೂಜಾ ಅವರು 2022ರಲ್ಲಿ ಸುನೀಲ್ ಜೊತೆ ವಿವಾಹ ಮಾಡಿಕೊಂಡಿದ್ದರು. ಆರಂಭದಲ್ಲಿ ಎಚ್ಎಸ್‌ಆರ್‌ ಲೇಔಟ್‌ನಲ್ಲಿ ನೆಲೆಸಿದ್ದರು. ಅನಿಲ್‌ ಹಾಗೂ ಅವರ ಪತ್ನಿಯೂ ಇವರ ಜತೆಗಿದ್ದರು. ಮನೆಯಲ್ಲಿ ಗಲಾಟೆ ನಡೆದ ಕಾರಣದಿಂದ ಗಂಗಮ್ಮನಗುಡಿ ಸಮೀಪದ ಲಕ್ಷ್ಮೀ ಲೇಔಟ್‌ಗೆ ಬಂದು ನೆಲೆಸಿದ್ದರು. ಗುರುವಾರ ಸುನೀಲ್‌ ಕೆಲಸಕ್ಕೆ ತೆರಳಿದ್ದ ಮೇಲೆ ಪೂಜಾ ಮನೆಯಲ್ಲೇ ಉಳಿದುಕೊಂಡಿದ್ದರು. ಅನಿಲ್‌ಗೆ ಕರೆ ಮಾಡಿ ಗಲಾಟೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅದಾದ ಮೇಲೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT