ಸೋಮವಾರ, ನವೆಂಬರ್ 30, 2020
22 °C

ಮದ್ಯ ನಿಷೇಧಕ್ಕೆ ಆಗ್ರಹಿಸಿದ ಸತ್ಯಾಗ್ರಹಿಗಳಿಗೆ ನಗರ ಪ್ರವೇಶ ನಿರಾಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆಯರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ನಗರದ ರೈಲು ನಿಲ್ದಾಣಕ್ಕೆ ಬಂದಿದ್ದಾರೆ.

ಅಲ್ಲಿಂದ ಅವರನ್ನು ಸ್ವಾತಂತ್ರ ಉದ್ಯಾನವನಕ್ಕೆ ಹೋಗಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಮೆರವಣಿಗೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ನಿಲ್ದಾಣದಲ್ಲಿ ಕುಳಿತು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಪ್ರತಿಭಟನೆ ನಡೆಸುವುದಾಗಿ ತಿಂಗಳ ಮುಂಚೆಯೇ ಪೊಲೀಸರಿಗೆ ಅರ್ಜಿ ಸಲ್ಲಿಸಿ, ಅನುಮತಿಯನ್ನು ಪಡೆಯಲಾಗಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡುತ್ತಿಲ್ಲ. ಈ ವರ್ತನೆ ಖಂಡನೀಯ’ ಎಂದು ಮುಖಂಡರು ಆರೋಪಿಸಿದ್ದಾರೆ.

‘ರಾಜ್ಯದಲ್ಲಿ ಮದ್ಯಮಾರಾಟ ನಿಷೇಧ ಮಾಡಬೇಕು. ಹಂತಹಂತವಾಗಿ ಮಾಡುವುದಾದರೆ ಮಾಹಿತಿ ನೀಡಬೇಕು. ಪ್ರತಿಗ್ರಾಮದಲ್ಲಿ ಸಮಿತಿ ರಚಿಸಬೇಕು ಅದರಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಹೆಚ್ಚಿರಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವ, ಅಕ್ರಮ ಮದ್ಯ ಮಾರಾಟ ತಡೆಯುವ ಅಧಿಕಾರ ಸಮಿತಿಗೆ ಕೊಡಬೇಕು’ ಎಂದು ಪ್ರತಿಭಟನಾನಿರತರ ಮಹಿಳೆಯರು ಒತ್ತಾಯಿಸಿದರು.


ಪ್ರತಿಭಟನಾನಿರತ ಮಹಿಳೆಯರನ್ನು ಉದ್ದೇಶಿಸಿ ರಂಗಕರ್ಮಿ ಪ್ರಸನ್ನ ಮಾತನಾಡಿದರು.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು