ಭಾನುವಾರ, ಜೂಲೈ 5, 2020
27 °C

ಕ್ವಾರಂಟೈನ್‌ಗೆ ನಿರಾಕರಿಸಿ ಕರ್ತವ್ಯಕ್ಕೆ ಅಡ್ಡಿ ಆರೋಪ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರಕ್ಕೆ ಹೊರರಾಜ್ಯದಿಂದ ಬಂದು ಕ್ವಾರಂಟೈನ್ ಆಗಲು ನಿರಾಕರಿಸಿ, ಪೊಲೀಸರ ಮೇಲೆಯೇ ಕೈ ಮಾಡಲು ಮುಂದಾದ ಯುವತಿ ವಿರುದ್ಧ ನಗರ ರೈಲು ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ (ಮೇ 26) ಸಂಜೆ 7.30ಕ್ಕೆ ದೆಹಲಿಯಿಂದ ವಿಶೇಷ ಸೂಪರ್ ಫಾಸ್ಟ್ ರೈಲಿನಲ್ಲಿ ನಗರಕ್ಕೆ ಬಂದ ಹರಿಯಾಣದ ಟ್ವಿಂಕಲ್ ರಾವಲ್ (25) ಕ್ವಾರಂಟೈನ್ ಆಗಲು  ನಿರಾಕರಿಸಿದ್ದರು. ಬಿಬಿಎಂಪಿ ಸಿಬ್ಬಂದಿ ಜತೆ ವಾಗ್ವಾದ ನಡೆಸಿದ್ದರು. ಕರ್ತವ್ಯನಿರತ ಪೊಲೀಸರು ಮತ್ತು ಸಿಬ್ಬಂದಿ ಮೇಲೆಯೂ ಕೈ ಮಾಡಲು ಮುಂದಾಗಿದ್ದರು.

ಈ ಕುರಿತು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಜಂಟಿ ಆಯುಕ್ತ ಚಿದಾನಂದ ದೂರು ನೀಡಿದ್ದರು. ಹೀಗಾಗಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.