ಬೆಂಗಳೂರು: ‘ಮಹಿಳೆಯರ ದಣಿವರಿಯದ ದುಡಿಮೆಗೆ ಪ್ರೋತ್ಸಾಹ ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಸಮಗ್ರಾಭಿವೃದ್ಧಿ ಸಂಸ್ಥೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ’ ಎಂದು ಸಂಸ್ಥೆಯ ಸಂಸ್ಥಾಪಕಿ ಡಾ.ಸ್ನೇಹಾ ರಾಕೇಶ್ ತಿಳಿಸಿದರು.

ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಸಮಗ್ರಾಭಿವೃದ್ಧಿ ಸಂಸ್ಥೆಯು ಆರ್‌ವಿಜಿ ಫೌಂಡೇಷನ್ ಹಾಗೂ ಅಕರ್‌ಮ್ಯಾಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘100 ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೊರೊನಾ ಸಂದರ್ಭದಲ್ಲಿ ಮಹಿಳಾ ಪೊಲೀಸರು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ವೈದ್ಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಇತರ ಕ್ಷೇತ್ರಗಳಲ್ಲೂ ಮಹಿಳೆಯರು ಛಾಪು ಮೂಡಿಸುತ್ತಿದ್ದಾರೆ. ನಮ್ಮ ಸಂಸ್ಥೆಯು ಅಂತಹವರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ’ ಎಂದರು.

ವೈದ್ಯೆಯರಾದ ಡಾ.ದಿಶಾ ಎಸ್.ಕುಮಾರ್, ಡಾ.ಪದ್ಮಾವತಿ, ಡಾ.ಮಂಜುಳಾ, ಪೊಲೀಸ್ ಸಿಬ್ಬಂದಿ ಶಿಲ್ಪಾ, ನಟಿ ಸಂಚಿತಾ ಹೆಗ್ಡೆ, ಗಾಯಕಿಯರಾದ ಗಾನವಿ, ಹರ್ಷ ರಂಜನಿ, ಶಶಿಕಲಾ ಅವರು ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.