ಬೆಂಗಳೂರು: ‘ಮಹಿಳೆಯರನ್ನು ಗೌರವಿಸುವ ಕಾರ್ಯ ಕೇವಲ ಆಚರಣೆಗೆ ಸೀಮಿತವಾಗದೆ, ಸಾಮಾಜಿಕ ಮೌಲ್ಯವಾಗಿ ಪ್ರತಿದಿನವೂ ಅಳವಡಿಸಿಕೊಳ್ಳಬೇಕಾದ ಕರ್ತವ್ಯವಾಗಿದೆ’ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್. ಪ್ರದೀಪ್ ಅಭಿಪ್ರಾಯಪಟ್ಟರು.

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಬೆಂಗಳೂರು ದಕ್ಷಿಣ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.

‘ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜನೀಯ ಸ್ಥಾನವಿದೆ. ಮಹಿಳಾ ಶಕ್ತಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದು ಹೇಳಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ, ‘ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕಾರ್ಯವಾಗಬೇಕಿದೆ. ಎಲ್ಲ ವಲಯಗಳಲ್ಲೂ ಪದಾಧಿಕಾರಿಗಳ ಸಂಖ್ಯೆ ಹೆಚ್ಚಾಗಬೇಕು. ಸದಸ್ಯರ ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುವ ಉದ್ದೇಶದಿಂದ ಶೀಘ್ರದಲ್ಲೇ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು’ ಎಂದರು.

ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಮಹಾಲಕ್ಷ್ಮಿ ಪೂಜೆ ಹಾಗೂ ಕುಂಕುಮಾರ್ಚನೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಶಿಕ್ಷಣ, ಸಾಮಾಜಿಕ ಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಇದೇ ವೇಳೆ ಗೌರವಿಸಲಾಯಿತು.

ಸಂಘದ ಬೆಂಗಳೂರು ದಕ್ಷಿಣ ಘಟಕದ ಅಧ್ಯಕ್ಷೆ ಪೂರ್ಣಿಮಾ, ರಾಜ್ಯ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಸೋಮಯಾಜಿ, ರಾಜ್ಯ ಉದ್ಯಮ ವಿಭಾಗದ ಅಧ್ಯಕ್ಷ ಶ್ರೀಧರ, ಬೆಂಗಳೂರು ದಕ್ಷಿಣ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಸೂರ್ಯನಾರಾಯಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.