ಬೆಂಗಳೂರು: ಕನಿಷ್ಠ ವೇತನ ನಿಗದಿಯಲ್ಲಿನ ತಾರತಮ್ಯ ವಿರೋಧಿಸಿ ಹಾಗೂ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ, ಮಾನವೀಯ ವಾತಾವರಣ ಕಲ್ಪಿಸುವಂತೆ ಆಗ್ರಹಿಸಿ ಗಾರ್ಮೆಂಟ್ ಆ್ಯಂಡ್ ಟೆಕ್ಸ್ಟೈಲ್ ವರ್ಕರ್ಸ್ ಯೂನಿಯನ್ ಜುಲೈ 20ರಂದು ‘ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಸಮಾವೇಶ’ ಆಯೋಜಿಸಿದೆ.

‘ರಾಜ್ಯದಲ್ಲಿ ಸುಮಾರು ನಾಲ್ಕು ಲಕ್ಷ ಮಹಿಳೆಯರು ಗಾರ್ಮೆಂಟ್ಸ್ ಉದ್ಯಮದಲ್ಲಿದ್ದಾರೆ. ಯುರೋಪ್, ಅಮೆರಿಕದ ಬೃಹತ್ ಕಾರ್ಪೊರೇಟ್ ಕಂಪನಿಗಳಿಗೆ ಬ್ರ್ಯಾಂಡ್ ಉಡುಪು ಹೊಲಿಯುವ ಕಾರ್ಮಿಕರಿಗೆ ಕನಿಷ್ಠ ವೇತನವೂ ಸಿಗುತ್ತಿಲ್ಲ’ ಎಂದು ಯೂನಿಯನ್ ಸಂಚಾಲಕಿ ಆರ್. ಪ್ರತಿಭಾ ದೂರಿದ್ದಾರೆ.

‘ರಾಜ್ಯದ ಬೇರೆ ಉದ್ಯಮಗಳ ಕಾರ್ಮಿಕರಿಗೆ ಕನಿಷ್ಠ ₹23 ಸಾವಿರ ವೇತನ ನಿಗದಿ ಮಾಡಲಾಗಿದೆ. ಗಾರ್ಮೆಂಟ್ಸ್ ಕಾರ್ಮಿಕರಿಗೆ ₹12 ಸಾವಿರ ನಿಗದಿ ಮಾಡಿ ರಾಜ್ಯ ಸರ್ಕಾರ ಮಹಿಳಾ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುತ್ತಿದೆ. ಯಾವುದೇ ಸುರಕ್ಷತೆ ಇಲ್ಲದೆ, ಮಹಿಳೆಯರಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿಸಲು ಮಾಲೀಕರಿಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

‘ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಸಮಾವೇಶದಲ್ಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಅನ್ಯಾಯಗಳ ಕುರಿತು ಚರ್ಚಿಸಲಾಗುತ್ತದೆ’ ಎಂದು ಪ್ರತಿಭಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.