ಭಾನುವಾರ, ಜನವರಿ 19, 2020
24 °C

ಕೇಬಲ್ ಅಳವಡಿಕೆ ವೇಳೆ ಗ್ಯಾಸ್ ಪೈಪ್‌ಲೈನ್ ಸ್ಫೋಟ: ಓರ್ವ ಮಹಿಳೆಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಿಯೋ ಕಂಪನಿಯ ಕೇಬಲ್ ಅಳವಡಿಕೆ ವೇಳೆ ಗೇಲ್ ಪೈಪ್‌ಲೈನ್‌ನಿಂದ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ ಒಬ್ಬ ಮಹಿಳೆ ಗಾಯಗೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ರೋಡ್ ಬಳಿ ಸೋಮವಾರ  ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ಸಂಧ್ಯಾರಾಣಿ ಎಂಬವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ತೀವ್ರತೆಗೆ ಸ್ಲಾಬ್ ಗಳು ಮತ್ತು ಅಂಗಡಿಯಲ್ಲಿನ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿವೆ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು