ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್‌ಗೆ ಮಹಿಳಾ ಒಕ್ಕೂಟ ಬೆಂಬಲ

Last Updated 8 ಫೆಬ್ರುವರಿ 2020, 19:41 IST
ಅಕ್ಷರ ಗಾತ್ರ

ಬೆಂಗಳೂರು:ಸರೋಜಿನಿ ಮಹಿಷಿ ವರದಿ ಜಾರಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟಇದೇ 13ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ ರಾಜ್ಯ ಮಹಿಳಾ ಒಕ್ಕೂಟ ಬೆಂಬಲ ಸೂಚಿಸಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿನುತಾ, ‘ಕನ್ನಡ ಶಾಲೆಗಳಲ್ಲಿ ಶಿಕ್ಷಣ ಪಡೆದವರಿಗೆ ರಾಜ್ಯದಲ್ಲಿ ಉದ್ಯೋಗ ಸಿಗುತ್ತಿಲ್ಲ. ಮಾತೃಭಾಷೆಯಲ್ಲಿ ಕಲಿತವರು ನಿರುದ್ಯೋಗಿಗಳಾಗಿ ಉಳಿಯುತ್ತಿದ್ದಾರೆ. ಕನ್ನಡಿಗರಿಗೆ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಜಾರಿ ಮಾಡಬೇಕು’ ಎಂದರು.

ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್, ‘ಬಂದ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ. ಕಾರ್ಮಿಕ, ಚಾಲಕ ಹಾಗೂ ವಿವಿಧ ಸಂಘಟನೆಗಳುಬಂದ್‌ಗೆ ಬೆಂಬಲ ನೀಡಿವೆ. ಮುನ್ನೆಚ್ಚರಿಕೆಯಾಗಿ ಬಂದ್‌ ದಿನದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT