ಬೆಂಗಳೂರು: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಎರಡೂ ಸದನಗಳಲ್ಲಿ ಮಂಡಿಸಿತ್ತು. ಆದರೆ, ವಿರೋಧ ಪಕ್ಷಗಳ ನಿಲುವಿನಿಂದಾಗಿ ಮಸೂದೆ ಅಂಗೀಕಾರವಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಹೇಳಿದರು.

ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು ಮೇಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಮತ್ತೊಂದು ಅಧಿವೇಶನ ಕರೆದು ಈ ಮಸೂದೆಯನ್ನು ಮಂಡಿಸಿ, ಜಾರಿಗೊಳಿಸುವ ಭರವಸೆ ಇದೆ’ ಎಂದರು.

‘ತೈಲ ಬಳಕೆ ಕುರಿತು ಮೋದಿ ಅವರ ಕರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಮೆರಿಕ-ಇಸ್ರೇಲ್- ಇರಾನ್ ನಡುವಿನ ಸಂಘರ್ಷದಿಂದ ಜಾಗತಿಕವಾಗಿ ಅಪಾರ ದುಷ್ಪರಿಣಾಮ ಬೀರಿದೆ. ತೈಲ ಬಿಕ್ಕಟ್ಟು ಹೆಚ್ಚಾಗಿದೆ. ಆದ್ದರಿಂದ ಪೆಟ್ರೋಲ್, ಡಿಸೇಲ್ ಹಾಗೂ ರಾಸಾಯನಿಕ ಗೊಬ್ಬರವನ್ನು ಎಚ್ಚರಿಕೆಯಿಂದ ಬಳಕೆ ಮಾಡುವಂತೆ ದೇಶದ ಜನರಿಗೆ ತಿಳಿಸಿದ್ದು, ಅವರ ಮನವಿಯನ್ನು ನಾವೆಲ್ಲರೂ ಸ್ವಾಗತಿಸಬೇಕು’ ಎಂದು ಸಲಹೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-253820606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.