ಗುರುವಾರ , ಏಪ್ರಿಲ್ 2, 2020
19 °C

ಪತಿ ಮನೆಯವರ ಕಿರುಕುಳ: ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೊಸದಾಗಿ ಮದುವೆಯಾಗಿದ್ದ 23 ವರ್ಷದ ಮಹಿಳೆಯೊಬ್ಬರು ಗಂಡ ಹಾಗೂ ಅತ್ತೆಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಕೊಡಿಗೆಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ರವಿಕಲಾ ಎಂದು ಗುರುತಿಸಲಾಗಿದೆ. ಕೊಡಿಗೆಹಳ್ಳಿ ನಿವಾಸಿಯಾದ ಈಕೆ ವಾಹನ ಚಾಲಕ ರಾಜ ಎಂಬುವರನ್ನು ಕಳೆದ ಅಕ್ಟೋಬರ್‌ನಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮಹಿಳೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ತಮ್ಮ ಮಗಳಿಗೆ ಗಂಡ ಹಾಗೂ ಆತನ ತಾಯಿ ಸುಂದರಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯುವತಿಯ ತಂದೆ ಅಂತೋಣಿ ಸ್ವಾಮಿ ದೂರಿನಲ್ಲಿ ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪತಿ ಹಾಗೂ ಅವರ ತಾಯಿಯನ್ನು ಬಂಧಿಸಲಾಗಿದೆ. ಇಬ್ಬರನ್ನೂ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು