ಬೆಂಗಳೂರು: ಬನಶಂಕರಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೀಪಿಕಾ (26) ಎಂಬುವರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

‘ಅಜ್ಜಂಪುರದ ದೀಪಿಕಾ, ಬನಶಂಕರಿ ಠಾಣೆ ವ್ಯಾಪ್ತಿಯ ಕದಿರೇನಹಳ್ಳಿಯ ಜಯಕುಮಾರ್ ಅವರನ್ನು ಮದುವೆಯಾಗಿದ್ದರು. ಅವರಿಗೆ 4 ವರ್ಷದ ಮಗ ಇದ್ದ. ‘ನನ್ನ ಸಾವಿಗೆ ಪತಿಯ ಕಿರುಕುಳವೇ ಕಾರಣ’ ಎಂದು ಆರೋಪಿಸಿ ವಿಡಿಯೊ ಮಾಡಿಟ್ಟು ದೀಪಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೊ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪತಿ ಕಿರುಕುಳದಿಂದ ಬೇಸತ್ತಿದ್ದ ದೀಪಿಕಾ, ಮಗನ ಜೊತೆ ಅಜ್ಜಂಪುರದಲ್ಲಿರುವ ತವರು ಮನೆಗೆ ಹೋಗಿದ್ದರು. ಆದರೆ, ಅನಾರೋಗ್ಯದಿಂದಾಗಿ ಮಗ ಮೃತಪಟ್ಟಿದ್ದ. ಅದರಿಂದ ದೀಪಿಕಾ ಮತ್ತಷ್ಟು ನೊಂದಿದ್ದರು.’

‘ಪತಿ ವಿರುದ್ಧ ಅಜ್ಜಂಪುರ ಠಾಣೆಗೆ ದೀಪಿಕಾ ದೂರು ಕೊಟ್ಟಿದ್ದರು. ಅದಾದ ಕೆಲ ದಿನಗಳ ನಂತರ ಅಜ್ಜಂಪುರ ತೊರೆದಿದ್ದರು. ಮಗಳು ನಾಪತ್ತೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು’ ಎಂದೂ ಮೂಲಗಳು ತಿಳಿಸಿವೆ.

‘ತವರು ಮನೆಯಿಂದ ಪತಿಯ ಮನೆಗೆ ಬಂದಿದ್ದ ದೀಪಿಕಾ, ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.