ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಮೇಲೆ ಹಲ್ಲೆ: ನಿರ್ಮಾಪಕನ ಪತ್ನಿ, ಪುತ್ರನ ಬಂಧನಕ್ಕೆ ಆಗ್ರಹ

Last Updated 26 ಅಕ್ಟೋಬರ್ 2021, 19:39 IST
ಅಕ್ಷರ ಗಾತ್ರ

ಬೆಂಗಳೂರು:ಎದುರು ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದ ಆರೋಪಿಗಳಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್‌ ಪತ್ನಿ ರೇಖಾ, ಮಗ ಸ್ನೇಹಿತ್‌ ಹಾಗೂ ಇತರರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಜಗದೀಶ್‌ ಮನೆ ಎದುರು 50ಕ್ಕೂ ಹೆಚ್ಚು ಮಹಿಳೆಯರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಘಟನೆ ನಡೆದು ಮೂರು ದಿನವಾದರೂ ಮಹಾಲಕ್ಷ್ಮಿ ಲೇಔಟ್‌ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಹಲ್ಲೆಗೊಳಗಾಗಿರುವ ಮಹಿಳೆಯರಿಗೆ ನ್ಯಾಯ ಕೊಡಿಸುವ ಕೆಲಸವೂ ಆಗಿಲ್ಲ. ಆರೋಪಿಗಳನ್ನು ಬಂಧಿಸಲು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಅವರನ್ನು ವಶಕ್ಕೆ ಪಡೆಯಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT