ಕಾಮಗಾರಿಗೆ ಅಡ್ಡಿ: ಕ್ರಮಕ್ಕೆ ಆಗ್ರಹ
ಬೆಂಗಳೂರು: ಆರ್.ಆರ್.ನಗರ ವಲಯಕ್ಕೆ ಸೇರಿರುವ ವಾರ್ಡ್ ನಂ.40ರ ವ್ಯಾಪ್ತಿಯ ಕರಿವೋಬನಹಳ್ಳಿ ಗ್ರಾಮದ ಎಸ್ಎಲ್ಎನ್ ಎನ್ಕ್ಲೇವ್ ಬಡಾವಣೆಯಲ್ಲಿ ಕೈಗೊಂಡಿರುವ ಒಳಚರಂಡಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಸ್ಥಳೀಯರಾದ ಸುವರ್ಣಮ್ಮ ಮತ್ತು ಅವರ ಮಕ್ಕಳಾದ ಚೇತನ್ ಹಾಗೂ ಸೌಮ್ಯ ಕಾಮಗಾರಿಗೆ ಅಡ್ಡಿಪಡಿಸಿ,ರಸ್ತೆಯನ್ನು ಒತ್ತುವರಿ ಮಾಡಿದ್ದಾರೆ. ಜತೆಗೆ, ಜಲಮಂಡಳಿ ಅಳವಡಿಸಿದ್ದ ಒಳ ಚರಂಡಿ ಪೈಪ್ ಅನ್ನು ಕಿತ್ತು ಹಾಕಿದ್ದಾರೆ. ಮನೆಗಳಿಗೆ ಅಳವಡಿಸಿರುವ ಕೊಳವೆ ಬಾವಿ ನೀರಿನ ಪೈಪ್ ಸಂಪರ್ಕವನ್ನು ಕಿತ್ತು ಹಾಕಿದ್ದಾರೆ ಎಂದು ದೂರಿದ್ದಾರೆ.
ಈ ಬಗ್ಗೆ ಪೀಣ್ಯ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ ಹಾಗೂ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೆ ಇದು ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.