ಸೋಮವಾರ, ಏಪ್ರಿಲ್ 6, 2020
19 °C
ವಿಡಿಯೊ ಸಂವಾದ ನಡೆಸಿದ ಉಪಮುಖ್ಯಮಂತ್ರಿ

ಐಟಿ-ಬಿಟಿ: ಮನೆಯಿಂದಲೇ ಕಾರ್ಯ ನಿರ್ವಹಿಸಲು ಕಟ್ಟಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಐಟಿ- ಬಿಟಿ, ಸ್ಟಾರ್ಟ್‌ಅಪ್‌ ಕಂಪನಿಗಳ ಮುಖ್ಯಸ್ಥರ ಜತೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಕೊರೊನಾ ನಿಯಂತ್ರಣಕ್ಕಾಗಿ ಐಟಿ, ಬಿಟಿ, ಸ್ಟಾರ್ಟ್‌ಅಪ್‌ ಕಂಪನಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಈ ಮೊದಲೇ ಸಲಹೆ‌ ನೀಡಲಾಗಿತ್ತು. ಆದರೆ, ಕೆಲವಡೆ ಇದು ಜಾರಿ ಆಗಿಲ್ಲ ಎಂಬ ದೂರು ಕೇಳಿಬಂದಿತ್ತು’ ಎಂದರು.

‘ಮನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಬ್ರಾಡ್‌ ಬ್ಯಾಂಡ್‌, ಇಂಟರ್ನೆಟ್‌, ವಿದ್ಯುತ್ ಸಮಸ್ಯೆ ಎದುರಾಗುತ್ತದೆ. ಜತೆಗೆ, ಬಹಳಷ್ಟು ಮಂದಿ ಯುವ ಉದ್ಯೋಗಿಗಳು ಊಟದ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಪಿ.ಜಿ ಗಳಲ್ಲಿ ಸಮಸ್ಯೆ ಆಗುತ್ತಿವೆ ಎಂಬ ವಿಷಯಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಸ್ಕಾಂ ಹಾಗೂ ಟೆಲಿಕಾಂ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗುವುದು’ ಎಂದು ಹೇಳಿದರು.

ರಾಜ್ಯದ ಐಟಿ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣ, ಬಿಟಿ ವಿಷನ್‌ ಗ್ರೂಪ್‌ನ ಸದಸ್ಯೆ ಡಾ.ಕಿರಣ್‌ ಮಜುಂದಾರ್‌ ಷಾ, ನಾಸ್ಕಾಂ ಅಧ್ಯಕ್ಷೆ ದೇಬಜಾನಿ ಘೋಷ್‌ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು