ಕೆ.ಆರ್.ಪುರ: ಬೆಳತ್ತೂರು ಮತ್ತು ಮೇಡಹಳ್ಳಿ ಮುಖ್ಯರಸ್ತೆ ಕುರುಡು ಸೊಣ್ಣೆನಹಳ್ಳಿಯಲ್ಲಿ ಕೈಗೊಂಡಿರುವ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಯೋಜನೆ ಸರ್ವೆ ಪ್ರಕಾರ ಕಾಮಗಾರಿ ನಡೆಸದೆ ಮನೆ ಮಾಲೀಕರಿಗೆ ಅನುಕೂಲವಾಗುವಂತೆ ಗುತ್ತಿಗೆದಾರರು ಕಾಮಗಾರಿ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

60 ಅಡಿ ಮುಖ್ಯರಸ್ತೆಯಲ್ಲಿ ರಸ್ತೆಗೆ ಡಾಂಬರೀಕರಣ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿ ಯೋಜನೆ ನಡೆಯುತ್ತಿದೆ. ರಸ್ತೆಯ ವಿಸ್ತೀರ್ಣದ ಮೂರು ಅಡಿ ಕುಗ್ಗಿಸಿದ್ದು, ಚರಂಡಿಯ ಮಾರ್ಗದ ಪಥ ಬದಲಿಸಿದ್ದಾರೆ. ಕಾಮಗಾರಿ ವಿಚಾರದಲ್ಲಿ ಗುತ್ತಿಗೆದಾರ ಚಲಪತಿ ಎಂಬುವವರು ನಿರ್ಲಕ್ಷ್ಯ ತೋರಿದ್ದಾರೆ. ಅವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಸಂಘಟನೆಯ ಮುಖಂಡ ಹಾಗೂ ಗ್ರಾಮಸ್ಥ ಅಂಬರೀಶ್ ದೂರಿದರು.

ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಸರ್ವೇ ಪ್ರಕಾರ ಕಾಮಗಾರಿ ನಡೆಸದೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೈಗೊಂಡಿರುವ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಕಾಮಗಾರಿ ಸಂಬಂಧ ಸರ್ವೇ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.