ಮಂಗಳವಾರ, ಜೂನ್ 15, 2021
26 °C
ಸ್ಪರ್ಶ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಕಾರ್ಮಿಕನ ತುಂಡಾದ ಕೈ ಮರುಜೋಡಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಡೆದ ದುರ್ಘಟನೆಯಿಂದ ತುಂಡಾಗಿದ್ದ 55 ವರ್ಷದ ವ್ಯಕ್ತಿಯ ಎಡಗೈಯನ್ನು ಸ್ಪರ್ಶ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಮರುಜೋಡಿಸಿದ್ದಾರೆ. 

ಕಾರ್ಖಾನೆಯಲ್ಲಿ ಯಂತ್ರವೊಂದಕ್ಕೆ ಕೈ ಸಿಲುಕಿದ ಪರಿಣಾಮ ವ್ಯಕ್ತಿಯ ಬೆರಳುಗಳು ಕೂಡ ಕತ್ತರಿಸಿ ಹೋಗಿದ್ದವು. ತುಂಡಾದ ಕೈಯೊಂದಿಗೆ ವ್ಯಕ್ತಿಯನ್ನು ಬೊಮ್ಮಸಂದ್ರದ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಯಿತು.

ಡಾ. ಜಿತೇಂದ್ರನ್ ನೇತೃತ್ವದ ಪ್ಲಾಸ್ಟಿಕ್ ಸರ್ಜರಿ ತಜ್ಞರ ತಂಡ ವ್ಯಕ್ತಿಯನ್ನು ಪರಿಶೀಲಿಸಿ, ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿತು. ಇದಕ್ಕೂ ಮೊದಲು ವ್ಯಕ್ತಿಗೆ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಯಿತು. ಸೋಂಕು ತಗುಲಿಲ್ಲ ಎನ್ನುವುದು ದೃಢಪಡುತ್ತಿದ್ದಂತೆ ಶಸ್ತ್ರಚಿಕಿತ್ಸೆ ಆರಂಭಿಸಿದ ವೈದ್ಯರು, 10 ಗಂಟೆಗಳಲ್ಲಿ ಕೈ ಮರುಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು