ಬೆಂಗಳೂರಿನಿಂದ ರಾಜಸ್ಥಾನಕ್ಕೆ ಹೊರಟ ಕಾರ್ಮಿಕರು

ಬೆಂಗಳೂರು: ಕೊರೊನಾ ಸೋಂಕು ಕಾರಣ ಲಾಕ್‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಹೊರರಾಜ್ಯದ ಜನರಿಗಾಗಿ ರಾಜ್ಯ ಸರ್ಕಾರ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದು ಸೋಮವಾರ ಕಂಡು ಬಂತು.
ಚಿಕ್ಕಬಾಣಾವರ ರೈಲು ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ರಾಜಸ್ಥಾನದ ಜೈಪುರ ನಗರಕ್ಕೆ ಜನ ತಮ್ಮ ಸಾಮಾನು ಸರಂಜಾಮುಗಳನ್ನು ಮೂಟೆ ಕಟ್ಟಿಕೊಂಡು ಹೊರಟರು. ಪೊಲೀಸರು ಎಲ್ಲಾ ಕಾರ್ಮಿಕರಿಗೂ ತೆರಳಲು ಸಹಕರಿಸುತ್ತಿದ್ದುದು ಕಂಡು ಬಂತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.