ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ವಿಚಾರಕ್ಕೆ ಕಾರ್ಮಿಕರ ಪ್ರತಿಭಟನೆ | ಬಿಎಂಆರ್‌ಸಿಎಲ್‌ಗೆ ನೋಟಿಸ್

Last Updated 5 ಮೇ 2020, 20:56 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಮೆಟ್ರೊ’ ಕಾರ್ಮಿಕರ ವೇತನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಅರ್ಜಿದಾರರ ಅಕ್ಷೇಪಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆಗೆ ವಿವರಣೆ ನೀಡಿ’ ಎಂದು ಪ್ರತಿವಾದಿಗಳಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಿದೆ.

'ಮೆಟ್ರೊ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ ಮತ್ತು ಅವರನ್ನು ಅವರ ಸ್ವಂತ ರಾಜ್ಯಗಳಿಗೆ ಕಳಿಸಿಕೊಡಲಾಗುತ್ತಿಲ್ಲ' ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT