ಬೆಂಗಳೂರು: ‘ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ನಿಯಂತ್ರಿಸಲು ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ 60,507 ಆಂತರಿಕ ದೂರು ಸಮಿತಿಗಳನ್ನು ರಚಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಕೆ) 2013ರ ಅಧಿನಿಯಮದ ಪ್ರಕಾರ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಥವಾ ಖಾಸಗಿ ಕಚೇರಿಗಳು, ಕಾರ್ಖಾನೆಗಳು, ಗಾರ್ಮೆಂಟ್ಸ್, ವಿಶ್ವವಿದ್ಯಾಲಯಗಳು, ಸಂಘ–ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ರಚಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ’ ಎಂದು ಮಾಹಿತಿ ನೀಡಿದರು.

‘ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ 22,516 ಹಾಗೂ ಖಾಸಗಿ ಸಂಸ್ಥೆಗಳಲ್ಲಿ 37,991 ಆಂತರಿಕ ದೂರು ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗಳನ್ನು ರಚಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.