ಬುಧವಾರ, ಮೇ 25, 2022
30 °C

ಹಂತವಾಗಿ ಕಾಮಗಾರಿಗಳು ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ಷೇತ್ರದಲ್ಲಿ ನವನಗರೋತ್ಥಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗಿದೆ’ ಎಂದು ಶಾಸಕ ಎಂ.ಕೃಷ್ಣಪ್ಪ ತಿಳಿಸಿದರು.

ಕನಕಪುರ ರಸ್ತೆಯ ಸಿಂಗಾಪುರ್ ಗಾರ್ಡನ್ ಬಡಾವಣೆ ಬಳಿ ₹8 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ಷೇತ್ರದ ಎಲ್ಲ ರಸ್ತೆ ಮತ್ತು ಒಳಚರಂಡಿ ಕಾಮಗಾರಿ, ಉದ್ಯಾನ, ಬೀದಿ ದೀಪಗಳ ವ್ಯವಸ್ಥೆಯನ್ನು ಕಲ್ಪಿಸಲು ನಗರೋತ್ಥಾನ ವತಿಯಿಂದ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ಶೀಘ್ರದಲ್ಲೇ ಮುಗಿಸಿ ನಾಗರಿಕರಿಗೆ ಸೌಲಭ್ಯಕ್ಕೆ ಸಿಗುವಂತೆ ಮಾಡಬೇಕು’ ಎಂದು ಸೂಚಿಸಿದರು.

‘ಕನಕಪುರ ರಸ್ತೆಯಿಂದ ಗುಬ್ಬಲಾಳ, ಸುಬ್ರಹ್ಮಣ್ಯಪುರ, ಉತ್ತರಹಳ್ಳಿಯವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯಲಿದೆ’ ಎಂದೂ ಹೇಳಿದರು.

ಸ್ಥಳೀಯ ಮುಖಂಡ ಹನುಮಂತಯ್ಯ,‘ಈ ವ್ಯಾಪ್ತಿ ಸಂಪೂರ್ಣ ಗ್ರಾಮೀಣ ಪ್ರದೇಶಕ್ಕೆ ಸೇರ್ಪಡೆಯಾಗಿತ್ತು. ಅಭಿವೃದ್ಧಿಗೆ ಸಾಕಷ್ಟು ಅನುದಾನವೂ ಇರಲಿಲ್ಲ. ಕೃಷ್ಣಪ್ಪ ಅವರು ಶಾಸಕರಾದ ನಂತರ ವಿವಿಧ ಮೂಲಗಳಿಂದ ಹಂತಹಂತವಾಗಿ ಅನುದಾನ ತಂದಿದ್ದಾರೆ. ಇದರಿಂದ ಕ್ಷೇತ್ರ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು